ಪುತ್ತೂರು: ‘ಕಲಾವಿದ ರವಿ ರಾಮಕುಂಜ ಅವರು ಕೃಷ್ಣನ ವೇಷ ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಬರುವಂತೆ ವರ್ತಿಸಿದ್ದಾರೆ ಎಂದು ಆರೋಪಿಸಿರುವ ವಿಶ್ವಹಿಂದೂ ಪರಿಷತ್- ಬಜರಂಗದಳ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯು, ಕಲಾವಿದನ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಸೋಮವಾರ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ.
ವಿಶ್ವಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ, ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಪುತ್ತೂರು ನಗರ ಪ್ರಖಂಡದ ಅಧ್ಯಕ್ಷ ದಾಮೋದರ ಪಾಟಾಳಿ, ಪುತ್ತೂರು ಸಹಕಾರ್ಯದರ್ಶಿ ಶ್ರೀಧರ ತೆಂಕಿಲ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ ಅವರು ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರಿಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.