ಸಾವು
ಪ್ರಾತಿನಿಧಿಕ ಚಿತ್ರ
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಪಾದಚಾರಿ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ ಅಬ್ದುಲ್ ರಹಿಮಾನ್ ಗಂಭೀರ ಗಾಯಗೊಂಡ ಘಟನೆ ಸಂಪ್ಯ ಮಸೀದಿ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ಅಬ್ದುಲ್ ರಹಿಮಾನ್ ಅವರ ತಲೆ, ಸೊಂಟ ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದೆ. ಮಸೀದಿ ಎದುರು ದ್ವಿಚಕ್ರ ವಾಹನ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.