
ಪುತ್ತೂರು: ಕಾರು ಮತ್ತು ಆಟೊ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಆಟೊದಲ್ಲಿದ್ದ ಬಾಲಕಿ ಮೃತಪಟ್ಟಿದ್ದಾಳೆ.
ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಸಭಾಭವನದ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದ ಅಪಘಾತದಲ್ಲಿ ಚಾಲಕ, ಮೂವರು ಮಹಿಳೆಯರು, ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ.
ಅಟೊ ಚಾಲಕ ಪುತ್ತೂರು ನಗರದ ಹೊರವಲಯದ ಬನ್ನೂರಿನ ಮಹಮ್ಮದ್ ಹನೀಫ್ ಅವರ 6 ವರ್ಷ ವಯಸ್ಸಿನ ಪುತ್ರಿ ಫಾತಿಮತ್ ಶಜ್ವಾ ಮೃತಪಟ್ಟ ಬಾಲಕಿ.
ಮಹಮ್ಮದ್ ಹನೀಫ್ ಮತ್ತು ಅವರು ಸಂಬಂಧಿಕರು ಕೆದಂಬಾಡಿ ಗ್ರಾಮದ ತಿಂಗಳಾಡಿಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಕುಂಬ್ರ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಅವಘಡ ನಡೆದಿದೆ.
ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಆಟೊ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೂ ಹಾನಿಯಾಗಿದೆ. ಸಂಪ್ಯ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.