ADVERTISEMENT

ಪುತ್ತೂರು I ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ: ಅಶೋಕ್ ರೈ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 6:18 IST
Last Updated 29 ಡಿಸೆಂಬರ್ 2025, 6:18 IST
ಶಾಂತಿಗೋಡು ಗ್ರಾಮದಲ್ಲಿ ಕಾಂಕ್ರಿಟೀಕರಣ ಮಾಡಲಾದ ಪಾಣಂಬು ರಸ್ತೆಯನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು
ಶಾಂತಿಗೋಡು ಗ್ರಾಮದಲ್ಲಿ ಕಾಂಕ್ರಿಟೀಕರಣ ಮಾಡಲಾದ ಪಾಣಂಬು ರಸ್ತೆಯನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು   

ಪುತ್ತೂರು: ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಅನೇಕ ಕಡೆ ಹಲವಾರು ವರ್ಷಗಳಿಂದ ಆಗದ ಕೆಲಸಗಳು ಈ ಬಾರಿ ಆಗಿದೆ. ಅಭಿವೃದ್ಧಿ,  ಅನುದಾನ ಹಂಚಿಕೆಯಲ್ಲಿ ತಾರತಮ್ಯ, ರಾಜಕೀಯ ಮಾಡುವುದಿಲ್ಲ. ಗ್ರಾಮದ ಅಭ್ಯುದಯವಾಗಲು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.

ತಾಲ್ಲೂಕಿನ ಶಾಂತಿಗೋಡು ಗ್ರಾಮದಲ್ಲಿ ಕಾಂಕ್ರಿಟೀಕರಣ ಮಾಡಲಾದ ಪಾಣಂಬು ರಸ್ತೆ ಉದ್ಘಾಟಿಸಿ ಅವರು ಮಾತನಾಡಿ, ನರಿಮೊಗರು ಗ್ರಾಮಕ್ಕೆ ₹3.50 ಕೋಟಿ ಅನುದಾನ ಒದಗಿಸಿದ್ದೇನೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ವಕ್ತಾರ ರವೀಂದ್ರ ರೈ ನೆಕ್ಕಿಲು, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ, ಪಕ್ಷದ ಮುಖಂಡರಾದ ಬಾಬು ಶೆಟ್ಟಿ, ಚಂದ್ರಕಲಾ, ರಾಘವೇಂದ್ರ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.