ಪುತ್ತೂರು: ತಾಲ್ಲೂಕಿನ ಬೆಟ್ಟಂಪಾಡಿ ಹಾಗೂ ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳೂ ಶಾಸಕ ಅಶೋಕ್‌ಕುಮಾರ್ಕ್ ರೈ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಕಾಲೇಜಿನಲ್ಲಿ ಪ್ರಸ್ತುತ ಕಾಯಂ ಉಪನ್ಯಾಸಕರು ಮಾತ್ರ ಇದ್ದು, ಅತಿಥಿ ಶಿಕ್ಷಕರ ಕೊರತೆಯಿಂದಾಗಿ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ. ಶೀಘ್ರವಾಗಿ ಅತಿಥಿ ಉಪನ್ಯಾಸಕರ ನೇಮಕ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಸಲ್ಲಿಸಿದರು.
ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ಗುಣಮಟ್ಟದ ಶಿಕ್ಷಕರನ್ನೇ ನೇಮಕ ಮಾಡಬೇಕೆಂಬ ಶಿಕ್ಷಣ ಇಲಾಖೆಯ ಆದೇಶ ಇದೆ. ಕೇವಲ ಪದವಿ ಶಿಕ್ಷಣ ಪಡೆದ ಮಾತ್ರಕ್ಕೆ ಉಪನ್ಯಾಸ ಮಾಡಲು ಸಾಧ್ಯವಿಲ್ಲ. ಪಿಎಚ್‌ಡಿ ಸೇರಿದಂತೆ ಉನ್ನತ ವ್ಯಾಸಂಗ ಮಾಡಿರಬೇಕು ಎಂಬ ನಿಯಮ ಇರುವುದರಿಂದ ಈ ಹಿಂದೆ ಅತಿಥಿ ಉಪನ್ಯಾಸಕರಾಗಿದ್ದವರು ಶಿಕ್ಷಣ ಇಲಾಖೆಯ ಹೊಸ ಆದೇಶದ ವಿರುದ್ಧ ನ್ಯಾಯಾಲಯ ಮೆಟ್ಟಿಲೇರಿದ ಕಾರಣ ನೇಮಕಾತಿ ವಿಳಂಬವಾಗಿದೆ. ಸಚಿವರ ಜತೆ ಮತ್ತು ಇಲಾಖೆ ಪ್ರಮುಖರ ಜತೆ ಮಾತನಾಡಿ 15ದಿನಗಳೊಳಗೆ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.