ADVERTISEMENT

ನವಭಾರತಕ್ಕೆ ಮಕ್ಕಳನ್ನು ಸಜ್ಜುಗೊಳಿಸಿ: ಸಚಿವ ಸುನಿಲ್ ಕುಮಾರ್ ಕರೆ

ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 15:38 IST
Last Updated 5 ಸೆಪ್ಟೆಂಬರ್ 2022, 15:38 IST
ಪುತ್ತೂರಿನಲ್ಲಿ ಸೋಮವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಪುತ್ತೂರು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇದ್ದರು.
ಪುತ್ತೂರಿನಲ್ಲಿ ಸೋಮವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಪುತ್ತೂರು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇದ್ದರು.   

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ನವಭಾರತ ನಿರ್ಮಾಣಕ್ಕಾಗಿ ತಮ್ಮ ತರಗತಿಯ ಮಕ್ಕಳನ್ನು ಸಜ್ಜುಗೊಳಿಸುವ ಸಂಕಲ್ಪವನ್ನು ಶಿಕ್ಷಕರು ಮಾಡಬೇಕು. ಭವಿಷ್ಯದ ಭಾರತಕ್ಕಾಗಿ ಮಕ್ಕಳನ್ನು ಹೇಗೆ ತಯಾರು ಮಾಡಬಹುದು ಎಂಬ ದೂರದೃಷ್ಟಿಯನ್ನು ಶಿಕ್ಷಕರು ಹೊಂದಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಪುತ್ತೂರಿನ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾಧವಶ್ರೀ ಸಭಾಂಗಣದಲ್ಲಿ ಸೋಮವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಪುತ್ತೂರು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಅವರು ಉದ್ಘಾಟಿಸಿ, ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಶಿಕ್ಷಣ ಕೇವಲ ಪಾಠಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಆದರೆ, ಶಿಕ್ಷಕ ತಪ್ಪು ಮಾಡಿದರೆ ಭವಿಷ್ಯದ ಸಮಾಜದಲ್ಲಿ ಸಮಸ್ಯೆ ಎದುರಾಗುತ್ತದೆ ಎಂದು ಎಚ್ಚರಿಸಿದ ಅವರು ಶಿಕ್ಷಕರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಕೆಲಸ ಸರ್ಕಾರದ ಕಡೆಯಿಂದ ಆಗುತ್ತಿದೆ ಎಂದು ತಿಳಿಸಿದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ‘ಶಿಕ್ಷಣದಲ್ಲಿ ಗುಣಮಟ್ಟ ಕಾಪಾಡುವ ಜವಾಬ್ದಾರಿ ಸರ್ಕಾರಕ್ಕಿದೆ, ಜತೆಗೆ ಶಿಕ್ಷಕರ ಪಾತ್ರವೂ ಇದೆ. ಮೂಲಸೌಕರ್ಯಗಳನ್ನು ಒದಗಿಸಿಕೊಳ್ಳಬೇಕಾದ ಕೆಲಸವನ್ನು, ಪ್ರತಿಭೆಗಳನ್ನು ಬೆಳೆಸುವ ಕೆಲಸವನ್ನು ಶಿಕ್ಷಕರು ಮಾಡಬೇಕು. ವ್ಯವಸಾಯ ಕ್ಷೇತ್ರ ಲಾಭದಾಯಕ ಎಂಬ ವಿಚಾರವನ್ನು ಮಕ್ಕಳ ಮನಸ್ಸಿನಲ್ಲಿ ಹುಟ್ಟು ಹಾಕುವ ಕೆಲಸ ಆಗದಿದ್ದರೆ ಸಮಸ್ಯೆ ಎದುರಾಗುವ ದಿನಗಳು ದೂರವಿಲ್ಲ’ ಎಂದರು.

ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ವಕೀಲ ಎ.ಎಸ್.ಎನ್. ಹೆಬ್ಬಾರ್ ದಿಕ್ಸೂಚಿ ಭಾಷಣ ಮಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್, ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ಡಿವೈಎಸ್ಪಿ ವೀರಯ್ಯ ಹಿರೇಮಠ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಹಶೀಲ್ದಾರ್ ನಿಸರ್ಗಪ್ರಿಯ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಮಂಜುಳಾ ಮತ್ತು ಸುಮಂಗಲಾ, ಡಯೆಟ್ ನಿರ್ದೇಶಕಿ ರಾಜಲಕ್ಷ್ಮಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ಇದ್ದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಪರ್ದೇಶಕ ಸುಧಾಕರ ಕೆ. ಸ್ವಾಗತಿಸಿದರು. ಶಿಕ್ಷಕರಾದ ಪ್ರಶಾಂತ್ ಅನಂತಾಡಿ ಮತ್ತು ಹರಿಣಾಕ್ಷಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.