
ಪ್ರಜಾವಾಣಿ ವಾರ್ತೆ
ಫಾತಿಮಾ ಸಜ್ಲಾ ಬೈತ್ತಡ್ಕ
ಪುತ್ತೂರು (ದಕ್ಷಿಣ ಕನ್ನಡ): ಶಾಯಿಯಲ್ಲಿ ಅದ್ದುವ ಪೆನ್ ಬಳಸಿ, ಕುರ್ ಆನ್ ಬರೆದು ದಾಖಲೆ ಮಾಡಿದ್ದ ಪುತ್ತೂರು ತಾಲ್ಲೂಕಿನ ಕುಂಬ್ರ ಮರ್ಕಝ್ ಪದವಿ ವಿಭಾಗದ ವಿದ್ಯಾರ್ಥಿನಿ ಸಜ್ಲಾ ಇಸ್ಮಾಯಿಲ್ ಬೈತಡ್ಕ ಅವರು ಇದೀಗ ‘ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ‘ವರ್ಲ್ಡ್ ರೆಕಾರ್ಡ್ಸ್ ಆಫ್ ಎಕ್ಸಲೆಂಟ್’ ದಾಖಲೆಯೊಂದಿಗೆ ವಿಶ್ವ ಮಟ್ಟದ ಪ್ರತಿಭೆ ಎಂಬ ಮನ್ನಣೆಗೆ ಭಾಜನರಾಗಿದ್ದಾರೆ.
ಸಜ್ಲಾ ಇಸ್ಮಾಯಿಲ್ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಮಾಡಿದ್ದು, ‘ಐಬಿಆರ್ ಅಚೀವರ್’ ಪ್ರಶಸ್ತಿ ಪಡೆದಿದ್ದಾರೆ. ಇವರು ಬೈತ್ತಡ್ಕ ನಿವಾಸಿಯಾದ ಇಸ್ಮಾಯಿಲ್ ಮತ್ತು ಝಹ್ರಾ ಜಾಸ್ಮಿನ್ ದಂಪತಿಯ ಪುತ್ರಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.