ADVERTISEMENT

ಮಂಗಳೂರು| ರಾಹುಲ್ ಅನರ್ಹಗೊಳಿಸಿದ ಕ್ರಮ; ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 6:13 IST
Last Updated 25 ಮಾರ್ಚ್ 2023, 6:13 IST
ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು
ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು   

ಮಂಗಳೂರು: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹ ಗೊಳಿಸಿದ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ಲಾಲ್‌ಬಾಗ್‌ನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಕಾರರು ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ವಿಧಾನ ಪರಿಷತ್‌ನ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮತ್ತು ವಿಧಾನಸಭೆಯ ವಿಪಕ್ಷದ ಉಪನಾಯಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್‌ಕುಮಾರ್, ಪ್ರಮುಖರಾದ ಶಕುಂತಳಾ ಶೆಟ್ಟಿ, ಅಭಯಚಂದ್ರ ಜೈನ್, ಐವನ್‌ ಡಿಸೋಜ, ಜೆ.ಆರ್.ಲೋಬೊ, ಮೊಹಿಯುದ್ದೀನ್ ಬಾವ, ಶಾಲೆಟ್‌ ಪಿಂಟೊ, ನವೀನ್ ಡಿಸೋಜ ಶಶಿಧರ್ ಹೆಗ್ಡೆ ಮತ್ತಿತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.