ಸಾವು
(ಪ್ರಾತಿನಿಧಿಕ ಚಿತ್ರ)
ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಕಲ್ಲಾಪು ರೈಲ್ವೆ ಕ್ರಾಸ್ ಬಳಿ ರೈಲು ಹಳಿ ದಾಟುತ್ತಿದ್ದ ವೃದ್ಧರೊಬ್ಬರಿಗೆ ಚಲಿಸುವ ರೈಲು ಡಿಕ್ಕಿ ಹೊಡೆದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಬಾಬುರಾಯ ಶೆಟ್ಟಿಗಾರ ಯಾನೆ ರಾಮ ಗುರಿಕಾರ (85) ಎಂದು ಗುರುತಿಸಲಾಗಿದೆ. ಅವರು ಕಲ್ಲಾಪು ಶ್ರೀಮಹಾಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.