ಪ್ರಾತಿನಿಧಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆ ವರೆಗೂ ಭಾರಿ ಮಳೆಯಾಗಿದೆ.
ಪಶ್ಚಿಮ ಘಟ್ಟ ತಪ್ಪಲಿನ ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ನಿರಂತರ ಮಳೆಯಾಗುತ್ತಿರುವುದರಿಂದ ಈ ಎರಡೂ ತಾಲ್ಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಮಂಗಳೂರು ತಾಲ್ಲೂಕಿನಲ್ಲೂ ಮಳೆ ಅಬ್ಬರ ಜೋರಾಗಿತ್ತು. ನಗರದ ಜಯಶ್ರೀ ಗೇಟ್ ಬಳಿ ಆವರಣಗೋಡೆಯೊಂದು ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ರಸ್ತೆಗೆ ಬಿದ್ದ ಕೆಂಪುಕಲ್ಲುಗಳನ್ನು ಸ್ಥಳೀಯರು ತೆರವುಗೊಳಿಸಿದರು. ನಗರದಲ್ಲಿ ಬೆಳಿಗ್ಗೆ 7 ಗಂಟೆ ನಂತರ ಕೆಲಹೊತ್ತು ಮಳೆ ನಿಂತಿದ್ದು, ಬಳಿಕ ಮತ್ತೆ ಶುರುವಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.