ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಬೈಪಾಸ್ ರಸ್ತೆಯಲ್ಲಿ ಮಣ್ಣು ಕುಸಿದು ಸಂಚಾರಕ್ಕೆ ತೊಂದರೆಯಾಗಿತ್ತು
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುರುವಾರ ತಡರಾತ್ರಿ ಉತ್ತಮ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ತಡರಾತ್ರಿ ಗುಡ್ಡ ಕುಸಿದು ಸಂಚಾರ ಬಂದ್ ಆಗಿತ್ತು. ವಾಹನಗಳು ಊರಿನ ಮಧ್ಯೆ ಸಂಚರಿಸಿದವು. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಮಂಗಳೂರು ನಗರದಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.
ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 11.8 ಸೆಂ.ಮೀ. ಹಾಗೂ ಉಡುಪಿ ಜಿಲ್ಲೆಯಲ್ಲಿ ಸರಾಸರಿ11.6 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.
ಜುಲೈ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ವಾಡಿಕೆಯ ಮಳೆ 123.2 ಸೆಂ.ಮೀ. ಇದ್ದು, 168.5 ಸೆಂ.ಮೀ. ಮಳೆ ಸುರಿದಿದೆ. ಉಡುಪಿ ಜಿಲ್ಲೆಯಲ್ಲಿ ಜುಲೈ ತಿಂಗಳ ವಾಡಿಕೆ ಮಳೆ 114.8 ಸೆಂ.ಮೀ ಇದ್ದು,204.9 ಸೆಂ.ಮೀ. ಮಳೆ ಸುರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.