ADVERTISEMENT

ಚಿತ್ರ ಸಂಪುಟ | ಮಂಗಳೂರಿನಲ್ಲಿ ಶುರುವಾಗಿದೆ ಮಳೆ

​ಪ್ರಜಾವಾಣಿ ವಾರ್ತೆ
Published 18 ಮೇ 2020, 3:36 IST
Last Updated 18 ಮೇ 2020, 3:36 IST
ಮಂಗಳೂರಿನಲ್ಲಿ ಸೋಮವಾರ ನಸುಕಿನಲ್ಲಿ ಮಳೆ ಶುರುವಾಗಿದೆ. (ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ)
ಮಂಗಳೂರಿನಲ್ಲಿ ಸೋಮವಾರ ನಸುಕಿನಲ್ಲಿ ಮಳೆ ಶುರುವಾಗಿದೆ. (ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ)   
""
""
""
""
""
""
""

ಮಂಗಳೂರು: ನಗರದಲ್ಲಿ ಸೋಮವಾರ ಮುಂಜಾನೆ ಗುಡುಗು ಸಿಡಿಲು ಗಾಳಿ ಸಹಿತ ಮಳೆ ಸುರಿಯಿತು. ಬೆಳಿಗ್ಗೆ 5.40 ಸುಮಾರಿಗೆ ಆರಂಭಗೊಂಡ ಮಳೆ 8.30ರ ತನಕವೂ ಸುರಿಯುತ್ತಿತ್ತು.ಬಿಸಿಲಿನ ಝಳದಿಂದ ಬಸವಳಿದ ಜನರಿಗೆ ತಂಪು ನೀಡಿತು.

ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನರಿಗೆ ತೊಂದರೆಯಾಯಿತು. ಮೋಡಗಳು ದಟ್ಟೈಸಿದ್ದ ಕಾರಣ ಬೆಳಕು ಮಬ್ಬಾಗಿತ್ತು. ವಾಹನಗಳು ಹೆಡ್‌ಲೈಟ್ ಹಾಕಿಕೊಂಡೇ ಸಂಚರಿಸಿದವು.ಜಿಲ್ಲೆಯಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಯುವನೊಬ್ಬ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಮೃತನನ್ನು ಭರತ್ ಎಂದು ಗುರುತಿಸಲಾಗಿದೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ADVERTISEMENT

ಪ್ರಜಾವಾಣಿಯ ಛಾಯಾಗ್ರಹಕ ಗೋವಿಂದರಾಜ ಜವಳಿಮಂಗಳೂರು ಮಳೆಯನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.