ADVERTISEMENT

ಉಪ್ಪಿನಂಗಡಿ: ರಸ್ತೆಯಲ್ಲೇ ಹರಿದ ಮಳೆ ನೀರು

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 13:41 IST
Last Updated 15 ಜುಲೈ 2024, 13:41 IST
ಉಪ್ಪಿನಂಗಡಿ ಸಮೀಪದ ಓಡ್ಲ ಎಂಬಲ್ಲಿ ರಸ್ತೆಯನ್ನು ಅಗೆಯುತ್ತಿರುವುದು
ಉಪ್ಪಿನಂಗಡಿ ಸಮೀಪದ ಓಡ್ಲ ಎಂಬಲ್ಲಿ ರಸ್ತೆಯನ್ನು ಅಗೆಯುತ್ತಿರುವುದು   

ಉಪ್ಪಿನಂಗಡಿ: ಇಲ್ಲಿಗೆ ಸಮೀಪ ಓಡ್ಲ ಎಂಬಲ್ಲಿ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯನ್ನು ಸ್ಥಳೀಯರೊಬ್ಬರು ಅಕ್ರಮವಾಗಿ ಅಗೆದಿದ್ದು, ಆ ಮಣ್ಣನ್ನು ಚರಂಡಿ ಮೇಲೆ ಹಾಕಿದ್ದಾರೆ. ಚರಂಡಿ ಕಟ್ಟಿಕೊಂಡಿದ್ದು, ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದ ವಾಹನ ಚಾಲಕರು ಪರದಾಡುವಂತಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೈಪ್ ಲೈನ್ ಅಳವಡಿಸುವ ಸಂಬಂಧ ಭಾನುವಾರ ಮಧ್ಯಾಹ್ನ ರಸ್ತೆಯನ್ನು ಅಗೆದಿದ್ದು, ರಸ್ತೆಯಲ್ಲಿ ನೀರು ನಿಂತು ತೋಡಿನಂತಾಗಿದೆ. ವಾಹನ ಚಾಲಕರು ಮತ್ತು ಸಾರ್ವಜನಿಕರು ಈ ಬಗ್ಗೆ ಪಿಡಬ್ಲ್ಯುಡಿ ಎಂಜಿನಿಯರ್‌ಗೆ ಕರೆ ಮಾಡಿ ರಸ್ತೆ ಅಗೆದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

ರಸ್ತೆ ಅಗೆಯಲು ಯಾರಿಗೂ ಅನುಮತಿ ನೀಡಿಲ್ಲ. ರಸ್ತೆ ಅಗೆದು ಸಮಸ್ಯೆ ಆಗಿರುವ ಬಗ್ಗೆ ಮಾಹಿತಿ ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಿಡಬ್ಲ್ಯುಡಿಯ ಪುತ್ತೂರು ವಿಭಾಗದ ಜೆಇ ಕಾನಿಷ್ಕ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.