ADVERTISEMENT

ಮಂಗಳೂರು: ಬೆಂಬಲ ಬೆಲೆಯಲ್ಲಿ ಪೂರ್ಣ ಖರೀದಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 16:11 IST
Last Updated 26 ಏಪ್ರಿಲ್ 2022, 16:11 IST
ಭತ್ತ, ರಾಗಿ, ಜೋಳವನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸದಸ್ಯರು ಮಂಗಳೂರಿನ ಕ್ಲಾಕ್‌ ಟವರ್‌ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು. –ಪ್ರಜಾವಾಣಿ ಚಿತ್ರ
ಭತ್ತ, ರಾಗಿ, ಜೋಳವನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸದಸ್ಯರು ಮಂಗಳೂರಿನ ಕ್ಲಾಕ್‌ ಟವರ್‌ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು. –ಪ್ರಜಾವಾಣಿ ಚಿತ್ರ   

ಮಂಗಳೂರು: ಭತ್ತ, ರಾಗಿ, ಜೋಳವನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಪೂರ್ಣ ಖರೀದಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿಯ ವತಿಯಿಂದ ಮಂಗಳವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಭಾಗ್ಯಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಬಾರದು, ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು, ಕರ ನಿರಾಕರಣ ಚಳವಳಿಗಾರರ ಮನೆ ವಿದ್ಯುತ್ ಬಿಲ್ ಮನ್ನಾ ಮಾಡಬೇಕು, ಬಿತ್ತನೆ ಬೀಜವನ್ನು ಸಮರ್ಪಕವಾಗಿ ಪೂರೈಸಬೇಕು, ರಸಗೊಬ್ಬರದ ಬೆಲೆ ಇಳಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾ ಘಟದ ಅಧ್ಯಕ್ಷ ಓಝ್ವಾಲ್ಡ್ ಪ್ರಕಾಶ್ ಫರ್ನಾಂಡಿಸ್, ಕಾರ್ಯದರ್ಶಿ ಡಿ.ಕೆ. ಶಾಹುಲ್ ಹಮೀದ್, ಉಪಾಧ್ಯಕ್ಷ ಆಲ್ವಿನ್ ಮೆನೆಜಸ್, ರೈತರಾದ ಸನ್ನಿ ಡಿಸೋಜ ನೀರುಮಾರ್ಗ, ಸದಾನಂದ ಶೀತಲ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.