
ಪ್ರಜಾವಾಣಿ ವಾರ್ತೆ
ಮಂಗಳೂರು: ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿಯಲ್ಲಿ ಧಮ್ಕಿ ಹಾಕಿದ ಆರೋಪದ ಮೇಲೆ ಬಂಧನದಲ್ಲಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಗುರುವಾರ ಮಂಗಳೂರಿಗೆ ಕರೆತಂದ ಪೊಲೀಸರು ಸ್ಥಳ ಮಹಜರು ನಡೆಸಿದರು. ಕಾರು ಪತ್ತೆಯಾಗಿದ್ದ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲೂ ಸ್ಥಳ ಮಹಜರು ನಡೆಯಿತು.
ತಲೆ ಮರೆಸಿಕೊಂಡಿದ್ದ ವೇಳೆ ಕೆಲ ದಿನ ತಂಗಿದ್ದ ಮಂಗಳೂರಿನ ಮೈಕೆಲ್ ಎಂಬುವವರ ಪಚ್ಚನಾಡಿಯ ಫಾರ್ಮ್‌ಹೌಸ್‌ನಲ್ಲಿ ಸ್ಥಳ ಮಹಜರು ನಡೆಯಿತು. ಶಿಡ್ಲಘಟ್ಟ ಸರ್ಕಲ್ ಇನ್‌ಸ್ಪೆಕ್ಟರ್ ಆನಂದ್ ಕುಮಾರ್ ನೇತೃತ್ವದಲ್ಲಿ ಪೊಲೀಸರು, ಆರೋಪಿಯನ್ನು ಮಂಗಳೂರಿಗೆ ಕರೆತಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.