ರಾಮಕುಂಜ (ಉಪ್ಪಿನಂಗಡಿ): ರಾಮಕುಂಜದಲ್ಲಿರುವ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 500ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, ಶಿಕ್ಷಕರಿಗೆ ಅಭಿನಂದನಾ ಸಮಾರಂಭ ನಡೆಯಿತು.
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಬೆಂಜನಪದವು ಕರಾವಳಿ ಕಲರ್ ಕಾರ್ಟನ್ಸ್ ಸಂಸ್ಥೆ ಆಡಳಿತ ನಿರ್ದೇಶಕ ಕೆ.ಪಿ.ಶೆಟ್ಟಿ, ಪುತ್ತೂರು ಎಸ್ಆರ್‌ಕೆ ಲ್ಯಾಡರ್ಸ್‌ನ ಮಾಲೀಕ ಕೇಶವ ಅಮೈ ಮಾತನಾಡಿದರು.
ಕಾರ್ಕಳದ ಉದ್ಯಮಿ ಎಂ.ಗಣಪತಿ ಪೈ, ವಿದ್ಯಾ ಸಂಸ್ಥೆಯ ಕೆ.ಸೇಸಪ್ಪ ರೈ, ನಾರಾಯಣ ಭಟ್, ರಾಧಾಕೃಷ್ಣ ಕೆ.ಎಸ್, ಬಾಲಚಂದ್ರ ಮುಚ್ಚಿಂತ್ತಾಯ, ಶಿವಪ್ರಸಾದ್ ಇಜ್ಜಾವು, ಪ್ರವೀದ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಬಾರಿಂಜ, ಆಡಳಿತಾಧಿಕಾರಿ ಆನಂದ್ ಎಸ್.ಟಿ., ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ, ಕಿಶೋರ್ ಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.