ADVERTISEMENT

ಅಕ್ರಮ ಮರಳುಗಾರಿಕೆ ಹಣ ನನ್ನ ಸೋಲಿಗೆ ಕಾರಣ: ರಮಾನಾಥ ರೈ

​ಪ್ರಜಾವಾಣಿ ವಾರ್ತೆ
Published 19 ಮೇ 2023, 14:08 IST
Last Updated 19 ಮೇ 2023, 14:08 IST
ಬಿ.ರಮಾನಾಥ ರೈ
ಬಿ.ರಮಾನಾಥ ರೈ   

ಬಂಟ್ವಾಳ: ಕಳೆದ ಚುನಾವಣೆಯಲ್ಲಿ ಅಪಪ್ರಚಾರದ ಮೂಲಕ ನನ್ನನ್ನು ಸೋಲಿಸಿದ್ದ ಬಿಜೆಪಿ ಈ ಬಾರಿ ಅಕ್ರಮ ಮರಳುಗಾರಿಕೆಯ ಹಣ ಚೆಲ್ಲಿ  ಸೋಲಿಸಿದೆ. ಆದರೂ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿರುವುದು ಸಂತಸ ತಂದಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದ ಭರವಸೆಗಳ ಪೈಕಿ ಶೇ 99  ಈಡೇರಿಸಿದ ಹೆಗ್ಗಳಿಕೆಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರದು. ಈ ಬಾರಿ ಗ್ಯಾರಂಟಿ ಕಾರ್ಡ್‌ನ ಎಲ್ಲ ಭರವಸೆಗಳನ್ನು ಅವರು ಈಡೇರಿಸುತ್ತಾರೆ. ಎಂದರು.

‘ಚುನಾವಣೆ ಕಣದಿಂದ ಮಾತ್ರ ಹಿಂದೆ ಸರಿದಿದ್ದೇನೆ. ರಾಜಕೀಯದಿಂದ ನಿವೃತ್ತಿಗೊಂಡಿಲ್ಲ. ಪಕ್ಷ ಯಾವ ಜವಾಬ್ದಾರಿ ನೀಡಿದರೂ ನಿಷ್ಠೆಯಿಂದ ಪಾಲಿಸುವೆ. ನಾನು ನೈಜ ಕೃಷಿಕ. ಸಮಾಜಸೇವೆಯೇ ಉದ್ಯೋಗ. ಉದ್ಯಮ ಅಥವಾ ಕಮಿಷನ್ ವ್ಯವಹಾರ ಇಲ್ಲ ಎಂದು ಅವರು ಹೇಳಿದರು.

ADVERTISEMENT

ಪಿಯೂಸ್ ಎಲ್.ರಾಡ್ರಿಗಸ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಸುದರ್ಶನ್ ಜೈನ್, ಅಬ್ಬಾಸ್ ಆಲಿ, ಸದಾಶಿವ ಬಂಗೇರ, ಕೆ.ಮಾಯಿಲಪ್ಪ ಸಾಲ್ಯಾನ್, ಬಿ.ಮೋಹನ್, ಜಗದೀಶ ಕೊಯಿಲ, ಸುರೇಶ ಜೋರ, ನವಾಝ್ ಬಡಕಬೈಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.