
ಪ್ರಜಾವಾಣಿ ವಾರ್ತೆ
ಬಂಧನ
(ಪ್ರಾತಿನಿಧಿಕ ಚಿತ್ರ)
ಮಂಗಳೂರು: ಹಾಸನ ತಾಲ್ಲೂಕು ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಆರ್ಯಾಪು ಗ್ರಾಮದ ಸಂಶುದ್ದೀನ್ ಆಸ್ಗರ್ ಅಲಿ (23) ಬಂಧಿತ ಆರೋಪಿ. ‘ನವೆಂಬರ್ 24ರ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದ ಸಂತ್ರಸ್ತ ಮಹಿಳೆಗೆ ಮದ್ಯ ನೀಡಿದ್ದ ಆರೋಪಿಯು, ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾಗಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿ, ಆರೋಪಿಯನ್ನು ಮಂಗಳವಾರ ಬಂಧಿಸಿದ್ದು, ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.