ADVERTISEMENT

4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 2:41 IST
Last Updated 9 ಜೂನ್ 2021, 2:41 IST

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕಕ್ಕಿಂಜೆಯಲ್ಲಿ ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯು ಬಾಲಕಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಬಾಲಕಿಯ ತಂದೆ ಲಿಖಿತ ದೂರು ನೀಡಿದ್ದಾರೆ.

ಸಬ್‌ ಇನ್‌ಸ್ಪೆಕ್ಟರ್‌ ಪವನ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೋಮವಾರ ರಾತ್ರಿಯೇ ಆರೋಪಿ ಯನ್ನು ಬಂಧಿಸಲಾಗಿದೆ.

ADVERTISEMENT

ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯು ಇದೇ ಬಾಲಕಿಗೆ ಎರಡನೇ ಬಾರಿ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ. ಮೊದಲ ಬಾರಿ ಲೈಂಗಿಕ ದೌರ್ಜನ್ಯ ನಡೆಸಿದಾಗ ಮರ್ಯಾದೆಗೆ ಅಂಜಿ ಬಾಲಕಿಯ ಪೋಷಕರು ದೂರು ನೀಡಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.