ADVERTISEMENT

ಕೆಂಪು ಕಲ್ಲು ಗಣಿಗಾರಿಕೆಗೆ ಪರವಾನಗಿ: ಸಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 8:19 IST
Last Updated 7 ಜನವರಿ 2021, 8:19 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಟ್ಟಾ ಭೂಮಿಯಲ್ಲಿ 250 ಕೆಂಪು ಕಲ್ಲು ಗಣಿಗಾರಿಕೆಗೆ ಪರವಾನಗಿ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ ಪಾಟೀಲ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಗಡಿ ತಪಾಸಣಾ ಕೇಂದ್ರಗಳಲ್ಲಿ 196 ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಲಾಗುವುದು ಎಂದರು.

ಸಿಆರ್ ಝಡ್ ವಲಯದಲ್ಲಿ 104 ಕುಟುಂಬಗಳು ಸಾಂಪ್ರದಾಯಿಕವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದು, ಈ ಕುಟುಂಬಗಳ ಸಂಖ್ಯೆ ಹೆಚ್ಚಿದ ಕಾರಣ ಪರವಾನಗಿ ಹೆಚ್ಚಿಸಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.