ಮಂಗಳೂರು: ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಯುವ ಪತ್ರಕರ್ತರಿಗೆ ಆಗಾಗ ಪುನಃಶ್ಚೇತನ ಶಿಬಿರಗಳನ್ನು ಏರ್ಪಡಿಸಬೇಕು. ಇದರಿಂದ ಹಿರಿಯ ಪತ್ರಕರ್ತರ ಸಾಧನೆ ಹಾಗೂ ಅನುಭವವನ್ನು ಯುವ ಪತ್ರಕರ್ತರು ಅರಿಯಲು ಸಾಧ್ಯ ಎಂದು ತರ್ಜನಿ ಕಮ್ಯುನಿಕೇಷನ್ಸ್ ವ್ಯವಸ್ಥಾಪಕ ನಿರ್ದೇಶಕ ಸಂಜಯ ಪ್ರಭು ಹೇಳಿದರು.
ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ’ ಇ-ಪೇಪರ್‌ನ ತೃತೀಯ ಸಂಚಿಕೆಯನ್ನು ಶನಿವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮಂಗಳೂರು ಪ್ರೆಸ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷ ಆನಂದ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪತ್ರಕರ್ತರಾದ ಬಿ.ರವೀಂದ್ರ ಶೆಟ್ಟಿ, ಮಹಮ್ಮದ್ ಆರೀಫ್, ಭಾಸ್ಕರ ರೈ ಕಟ್ಟ ಇದ್ದರು. ಆರ್.ಸಿ.ಭಟ್ ಸ್ವಾಗತಿಸಿದರು. ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.