ADVERTISEMENT

356 ಕೆರೆಗಳಿಗೆ ಕಾಯಕಲ್ಪ

ಕೆರೆಯಂಗಳದಲ್ಲಿ ಸಸಿ ನಾಟಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 3:32 IST
Last Updated 11 ಜುಲೈ 2021, 3:32 IST
ಕೆರೆಯಂಚಿಗೆ ನಾಟಿ ಮಾಡಿದ ಗಿಡಕ್ಕೆ ಬೇಲಿ ಹಾಕಿರುವುದು
ಕೆರೆಯಂಚಿಗೆ ನಾಟಿ ಮಾಡಿದ ಗಿಡಕ್ಕೆ ಬೇಲಿ ಹಾಕಿರುವುದು   

ಉಜಿರೆ: ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ‘ನಮ್ಮೂರು, ನಮ್ಮ ಕೆರೆ’ ಕಾರ್ಯಕ್ರಮದ ಮೂಲಕ 293 ಕೆರೆಗಳನ್ನು ಹಾಗೂ ಸರ್ಕಾರದ ಕೆರೆ ಸಂಜೀವಿನಿ ಕಾರ್ಯಕ್ರಮದಡಿಯಲ್ಲಿ 63 ಕೆರೆಗಳು ಸೇರಿದಂತೆ ಒಟ್ಟು 356 ಕೆರೆಗಳಿಗೆ ಕಾಯಕಲ್ಪ ನೀಡಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್ ತಿಳಿಸಿದ್ದಾರೆ.

ಕೆರೆಯಂಗಳದಲ್ಲಿ ಗಿಡನಾಟಿ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯದಲ್ಲಿ ಹೊಸದಾಗಿ ಪುನಶ್ಚೇತನಗೊಂಡ 140 ಕೆರೆಗಳ ಸುತ್ತ ಪ್ರಾಣಿ-ಪಕ್ಷಿಗಳಿಗೆ, ಜನ-ಜಾನುವಾರಿಗೆ ಹಣ್ಣು, ಹೂವು, ಮೇವು, ನೆರಳು ಕೊಡುವ ಗಿಡಗಳನ್ನು ನೆಟ್ಟು ಬೆಳೆಸಲಾಗುವುದು. ಕೆರೆಯ ಏರಿ ಜರಿಯದಂತೆ ಏರಿಯ ಸುತ್ತ ಹುಲ್ಲು ಬೆಳೆಯುವ ಬೀಜಗಳ ಬಿತ್ತನೆ ಮಾಡಲಾಗುವುದು. ಸ್ಥಳೀಯ ಗ್ರಾಮ ಪಂಚಾಯಿತಿಗಳು, ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಸಂಘಟಿತರಾಗಿ ಸುಮಾರು 5,000 ಜನ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವರು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT