ಉಜಿರೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಶಿವಮೊಗ್ಗದಿಂದ ಪ್ರಾರಂಭವಾದ ಧರ್ಮ ರಕ್ಷಾ ಜಾಥಾವು ಧರ್ಮಸ್ಥಳಕ್ಕೆ ಮಂಗಳವಾರ ಸಂಜೆ ತಲುಪಿತು.
200ಕ್ಕೂ ಹೆಚ್ಚು ವಾಹನದಲ್ಲಿ ಭಕ್ತರು ಈಶ್ವರಪ್ಪ ಜೊಎ ಬಂದಿದ್ದರು. ಈ ವೇಳೆ ಈಶ್ವರಪ್ಪ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಗೌರವ ಸಲ್ಲಿಕೆ ಮಾಡಲಾಯ್ತು. ಜಾಥಾದೊಂದಿಗೆ ತುಂಗಾ- ಗಂಗಾ-ನೇತ್ರಾವತಿಯ ನದಿಯ ನೀರನ್ನು ತಂದು, ಧರ್ಮಸ್ಥಳದಲ್ಲಿ ಪ್ರೋಕ್ಷಣೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಈಶ್ವರಪ್ಪ, ‘ನಾವು ಧರ್ಮಸ್ಥಳ ಶುದ್ಧಿಕರಣ ಮಾಡಲು ಬಂದಿದ್ದೇವೆ.
ಕಾಶಿಯಿಂದ ಗಂಗಾ ಜಲ, ಶಿವಮೊಗ್ಗದಿಂದ ತುಂಗಾ, ಧರ್ಮಸ್ಥಳದಿಂದ ನೇತ್ರಾವತಿ ನೀರು ತಂದಿದ್ದೇವೆ.
ರಸ್ತೆಯಲ್ಲಿ ಪ್ರೋಕ್ಷಣೆ ಮಾಡಿ ಶುದ್ಧ ಮಾಡುತ್ತೇವೆ’ ಎಂದರು.
‘ಧರ್ಮಸ್ಥಳದ ಬಗೆಗಿನ ಅಪಪ್ರಚಾರದಲ್ಲಿ ರಾಷ್ಟ್ರದ್ರೋಹಿಗಳು ಕೈ ಜೋಡಿಸಿದ್ದಾರೆ. ಎಸ್‌ಐಟಿ ಮೂಲಕ ಸಾಕಷ್ಟು ಮಾಹಿತಿ ಹೊರಬಂದಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನು ಎನ್‌ಐಎಗೆ ವಹಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.