ಮಸೀದಿ ಸಾಂದರ್ಭಿಕ ಚಿತ್ರ
ಐಸ್ಟಾಕ್ ಚಿತ್ರ
ಬೆಳ್ತಂಗಡಿ (ದಕ್ಷಿಣ ಕನ್ನಡ): ತಾಲ್ಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಡಿ ಗ್ರಾಮದಲ್ಲಿ 'ಪುರುಷ ಕಟ್ಟುವ' ಆಚರಣೆಯಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮತ್ತು ಆಝಾನ್‌ಗೆ ಅವಹೇಳನ ಮಾಡಲಾಗಿದೆ ಎಂದು ದೂರು ದಾಖಲಾಗಿದೆ.
ಪ್ರಕರಣದಲ್ಲಿ 17 ಆರೋಪಿಗಳು ನೇರವಾಗಿ ಮತ್ತು 30 ಮಂದಿ ಪರೋಕ್ಷವಾಗಿ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ಮನೆ ನಿವಾಸಿ ಮಹಮ್ಮದ್ ರಫೀಕ್ ನೀಡಿರುವ ದೂರಿನಂತೆ ಸಾವ್ಯ ನಿವಾಸಿಗಳಾದ ವಸಂತ, ರಾಜೇಶ್, ಹರೀಶ್, ಪೆರಾಡಿ ನಿವಾಸಿಗಳಾದ ದಯಾನಂದ, ರಂಗನಾಥ, ಮೋಹನ್, ಶಮಿತ್, ರವಿ, ರಮೇಶ್ ಕುಲಾಲ್, ಸುರೇಶ್, ಅಶೋಕ ಕುಲಾಲ್, ಧನುಷ್ ಹರದೊಟ್ಟು, ಹರೀಶ್ ಬಂತೊಟ್ಟು, ರಮೇಶ್ ಆರ್.ಕೆ, ಸುರೇಶ್ ಬರೊಟ್ಟು, ಪ್ರಮೋದ್, ಪ್ರಕಾಶ್ ಪೆರಾಡಿ ಮತ್ತು 30 ಜನರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಇದೇ 14ರಂದು ರಾತ್ರಿ ಪುರುಷ ಕಟ್ಟುನ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿಕೊಂಡು ಹಿಂದೂ ಮುಸ್ಲಿಂ ಧರ್ಮಗಳ ನಡುವೆ ವೈಷಮ್ಯದ ಭಾವನೆಗಳನ್ನು ಉಂಟುಮಾಡುವ ಉದ್ದೇಶದಿಂದ ಅದನ್ನು ಸಾಮಾಜಿಕ ಜಾಕತಾಣಗಳಲ್ಲಿ ವೈರಲ್ ಮಾಡಿದ್ದ ಬಗ್ಗೆ ಕಲಂ 353(2) ಜೊತೆಗೆ 3(5) ಬಿ.ಎನ್.ಎಸ್ 2023 ರಂತೆ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.