ಮಂಗಳೂರು: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ನಿಂದನಾತ್ಮಕವಾಗಿ ಮಾತನಾಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಗ್ರಹಿಸಿದರು.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶ ಸೇವೆಯಲ್ಲಿರುವ ಅವರು ಕರ್ನಾಟಕದ ವೀರ ಸೊಸೆ. ಅವರ ವಿರುದ್ಧ ಸಚಿವರು ಅವಹೇಳನದ ಮಾತನಾಡಿರುವುದು ಬಿಜೆಪಿಯವರ ಮನಃಸ್ಥಿತಿಯನ್ನು ತೋರಿಸುತ್ತದೆ’ ಎಂದರು.
‘ಭಾರತ -ಪಾಕಿಸ್ತಾನ ನಡುವೆ ಯುದ್ಧ ನಡೆದು ಪಾಕಿಸ್ತಾನ ನಾಲ್ಕು ಭಾಗವಾಗಲಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಯುದ್ಧದ ಬಗ್ಗೆ ಸೈನಿಕರಿಗಿಂತ ಮೊದಲು ಸೂಲಿಬೆಲೆ ಅವರಿಗೆ ಗೊತ್ತಾಗಿದ್ದು ಹೇಗೆ? ಅವರಿಗೆ ಯಾರು ಮಾಹಿತಿ ನೀಡಿದ್ದಾರೆ? ಪ್ರಚೋದನಾಕಾರಿಯಾಗಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ನೀಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.