ಮಂಗಳೂರು: ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಚೆಗೆ ಆರಂಭಿಸಿರುವ ಅಕ್ಕ ಪಡೆಯನ್ನು ಮಂಗಳೂರು ನಗರ ಪೊಲೋಸ್ ಕಮಿಷನರೇಟ್ ವ್ಯಾಪ್ತಿಗೂ ವಿಸ್ತರಿಸಲಾಗುವುದು ಎಂದು
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ನಗರದ ನೆಹರೂ ಮೈದಾನದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪೊಲೀಸ್ ಇಲಾಖೆಯು ಎನ್ ಸಿಸಿ ಕೆಡೆಟ್ಸ್ ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಒಳಗೊಂಡ ಅಕ್ಕಪಡೆಗೆ ವಾಹನಗಳು ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಸಂಕುಚಿತ ಮನೋಭಾವದಿಂದ ಹೊರಬಂದು ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು.
ಭಾರತ ಇಂದು ಬಲಿಷ್ಟವಾಗಿದ್ದು ಇತರ ದೇಶಗಳನ್ನು ಮೀರಿ ಬೆಳೆದಿದೆ. ಕರ್ನಾಟಕವನ್ನೂವಿದೇ ರೀತಿ ಸಮೃದ್ಧವಾಗಿಸುವುದು ರಾಜ್ಯ ಸರ್ಕಾರದ ಉಧದೇಶ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ಮತ್ತು ಪ್ರವಾಸೋದ್ಯಮ ಕೇಂದ್ರಗಳನ್ನು ಅಭಿವೃದ್ಧಿಪಡಿಸಿ ಪ್ರವಾಸೋದ್ಯಮದಲ್ಲಿ ಹೂಡಿಕೆದಾರರನ್ನು ಆಕರ್ಷಿಸಲಾಗುವುದು ಎಂದು ಅವರು ತಿಳಿಸಿದರು.
ವಿಚ್ಛಿದ್ರಕಾರಿ ಶಕ್ತಿಗಳನ್ನು ಮಟ್ಟ ಹಾಕುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿಪಡಿಸಿ ಸ್ಥಳೀಯ ಯುವಸಮುದಾಯ ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಡೆಯಲು ಪ್ರಯತ್ನಿಸಲಾಗುತ್ತಿದೆ. ಯುವಕರು ದಾರಿ ತಪ್ಪಿ ನಡೆಯದಂತೆ ನೋಡಿಕೊಳ್ಳಲು ಮನೆ ಮಂದಿ ಗಮನಹರಿಸಬೇಕು. ತಮ್ಮ ಧರ್ಮವನ್ನು ಆಚರಿಸುತ್ತ ಪರಧರ್ಮವನ್ನು ಗೌರವಿಸಿ ನಡೆಯಬೇಕು ಎಂದ ಅವರುವ ಮೂಡುಬಿದಿರೆ ಮತ್ತು ಮುಲ್ಕಿಯಲ್ಲಿ ತಲಾ 12 ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಲಾಗುವುದು ಎಂದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಐವನ್ ಡಿಸೋಜ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.