ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಲೆಕುಡಿಯ ಸಮುದಾಯದವರನ್ನೂ ಪರಿಗಣಿಸಬೇಕು ಎಂದು ಮಲೆಕುಡಿಯರ ಸಂಘದ ಸುಬ್ರಹ್ಮಣ್ಯ ವಲಯ ವತಿಯಿಂದ ದೇವಸ್ಥಾನದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಮಲೆಕುಡಿಯ ಜನಾಂಗದವರಿಗೂ ಅವಿನಾಭಾವ ಸಂಬಂಧವಿದೆ. ಹಿಂದಿನ ಸಂಪ್ರದಾಯದಂತೆ ಸಮಿತಿಯಲ್ಲಿ ಸುಬ್ರಹ್ಮಣ್ಯದ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರಿಗೆ ಸದಸ್ಯ ಸ್ಥಾನ ನೀಡಬೇಕು. ಆದರೆ ಹೊಸ ಸಮಿತಿಯಲ್ಲಿ ಸಮುದಾಯದ ಮಂದಿಯ ಹೆಸರು ಕೈಬಿಡಲಾಗಿದೆ ಎಂಬ ಮಾಹಿತಿ ಇದೆ. ಸರ್ಕಾರ ಈ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.
ಮನವಿಗೆ ಸ್ಪಂದಿಸದೆ ಇದ್ದರೆ ಸಮುದಾಯದ ಮೂಲ ಕೆಲಸಗಳಾದ ರಥ ಕಟ್ಟುವುದೂ ಸೇರಿದಂತೆ ದೇವರ ಕೆಲಸಗಳನ್ನು ನಿಲ್ಲಿಸಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ದೇವಸ್ಥಾನದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಮನವಿ ಸ್ವೀಕರಿಸಿದರು.
ಮಲೆಕುಡಿಯ ಮುಖಂಡರಾದ ಬೆಳ್ಯಪ್ಪ ಎಂ.ಕೆ.ಸುಬ್ರಹ್ಮಣ್ಯ, ಉದಯ್ ಕುಮಾರ್ ಏನೆಕಲ್ಲು, ವಾಸುದೇವ, ನಾಗೇಶ್ ಎ.ವಿ., ಸುಬ್ರಹ್ಮಣ್ಯ, ಪ್ರಸಾದ್, ಧನುಷ್, ಜಗದೀಶ್, ನಂದರಾಜ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.