ADVERTISEMENT

ನ್ಯಾಯಾಂಗ ಮೂಲಸೌಕರ್ಯ ಅಭಿವೃದ್ಧಿ ಮಂಡಳಿ ಅಗತ್ಯ: ನ್ಯಾ. ನಜೀರ್‌

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2021, 16:19 IST
Last Updated 28 ಡಿಸೆಂಬರ್ 2021, 16:19 IST

ಪುತ್ತೂರು: ‘ಶಾಂತಿ ಮತ್ತು ಸುವ್ಯವಸ್ಥೆ ಇಲ್ಲದಿದ್ದಲ್ಲಿ ಸಮಾಜ ನೆಮ್ಮದಿಯಿಂದಿರಲು ಸಾಧ್ಯವಿಲ್ಲ. ಶಾಂತಿ– ಸುವ್ಯವಸ್ಥೆ ಕಾಪಾಡಲು ಅಗತ್ಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ’ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಹೇಳಿದರು.

ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಸಮಾಜದಲ್ಲಿ ಶಾಂತಿ– ಸುವ್ಯವಸ್ಥೆ ಕಾಪಾ
ಡುವ ಜವಾಬ್ದಾರಿ ಸರ್ಕಾರದ್ದಷ್ಟೇ ಅಲ್ಲ, ನ್ಯಾಯಾಂಗ ವ್ಯವಸ್ಥೆ ಮೇಲೂ ಆ ಜವಾಬ್ದಾರಿ ಇದೆ.ಹಾಗಾಗಿ ನ್ಯಾಯಾಂಗ ವ್ಯವಸ್ಥೆಗೆ ಮೂಲ ಸೌಲಭ್ಯ ಕಲ್ಪಿಸಲು, ‘ನ್ಯಾಯಾಂಗ ಮೂಲಸೌಕರ್ಯ ಅಭಿವೃದ್ಧಿ ಮಂಡಳಿ’ ಸ್ಥಾಪನೆ ಅಗತ್ಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT