ADVERTISEMENT

ಅನರ್ಹ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 7:11 IST
Last Updated 12 ಜೂನ್ 2020, 7:11 IST

ಮಂಗಳೂರು: ಕೆಲವರು ಇಲಾಖೆಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆದು, ಸರ್ಕಾರಕ್ಕೆ ವಂಚನೆ ಮಾಡಿರುವುದು ಕಂಡು ಬಂದಿದ್ದು, ಅನರ್ಹರು ಪಡೆದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇದೇ 15 ರೊಳಗೆ ಸಂಬಂಧಪಟ್ಟ ಕಚೇರಿಗೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ.

ತಾವಾಗಿಯೇ ಹಿಂದಿರುಗಿಸದಿದ್ದಲ್ಲಿ ಅಂತಹ ಕುಟುಂಬಗಳನ್ನು ಇಲಾಖೆಯಿಂದಲೇ ಪತ್ತೆ ಮಾಡಿ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಮುಕ್ತ ಮಾರುಕಟ್ಟೆ ದರದಲ್ಲಿ ಪಡಿತರ ಸಾಮಗ್ರಿಯ ದರವನ್ನು ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT