ADVERTISEMENT

‍‍ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಬಿ. ನಾಗೇಂದ್ರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2024, 16:19 IST
Last Updated 13 ಜನವರಿ 2024, 16:19 IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾಗೇಂದ್ರ ಬಿ, ಆಯುಕ್ತ ಎನ್. ಶಶಿಕುಮಾರ್ ಭಾಗವಹಿಸಿದ್ದರು – ಪ್ರಜಾವಾಣಿ ಚಿತ್ರ
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾಗೇಂದ್ರ ಬಿ, ಆಯುಕ್ತ ಎನ್. ಶಶಿಕುಮಾರ್ ಭಾಗವಹಿಸಿದ್ದರು – ಪ್ರಜಾವಾಣಿ ಚಿತ್ರ   

ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ. ನಾಗೇಂದ್ರ ಅಧ್ಯಕ್ಷತೆಯಲ್ಲಿ ಶನಿವಾರ ಇಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬುಡಕಟ್ಟು ಕಲ್ಯಾಣ ಇಲಾಖೆ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳ ವಿವರ ಪಡೆದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಆಯುಕ್ತ ಶಶಿಕುಮಾರ್, ಬುಡಕಟ್ಟು ಕಲ್ಯಾಣ ಇಲಾಖೆ ನಿರ್ದೇಶಕ ಕಲ್ಲೇಶ್,ಮಂಗಳೂರು ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್ ಕೆ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ. ಜೆ. ಪದ್ಮನಾಭ, ಪ್ರಧಾನ ವ್ಯವಸ್ಥಾಪಕ ರಾಜಶೇಖರ್. ಎ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.