ಮಂಗಳೂರು: ಮೂಲ್ಕಿಯ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಕಾನ್‌ಸ್ಟೆಬಲ್ ಒಬ್ಬರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಪೊಲೀಸ್ ಕಾನ್‌ಸ್ಟೆಬಲ್ ರೇಣುಕಾ ಅವರು ಮಧ್ಯಾಹ್ನ ಮನೆಗೆ ಊಟಕ್ಕೆ ತೆರಳುತ್ತಿದ್ದರು. ಈ ವೇಳೆ ಅವರ ಸ್ಕೂಟರ್ ನಿಯಂತ್ರಣಕ್ಕೆ ಸಿಗದೇ ಇದ್ದುದರಿಂದ ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಗಾಡಿಗೆ ಡಿಕ್ಕಿ ಹೊಡೆದಿತ್ತು. ಅದೇ ದಾರಿಯಲ್ಲಿ ಕಾರಿನಲ್ಲಿ ಬರುತ್ತಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗಾಯಗೊಂಡ ರೇಣುಕಾ ಅವರನ್ನು ತಮ್ಮ ಕಾರಿನಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಹಿಳಾ ಸಿಬ್ಬಂದಿಯನ್ನು ಮೂಲ್ಕಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.