ADVERTISEMENT

ರಸ್ತೆಗೆ ಆಲಂಕಾರಿಕ ವಿದ್ಯುದ್ದೀಪ ಅಳವಡಿಕೆ’

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 3:06 IST
Last Updated 30 ಸೆಪ್ಟೆಂಬರ್ 2022, 3:06 IST
ಮಂಗಳೂರಿನ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನದವರೆಗಿನ ರಸ್ತೆಯಲ್ಲಿ ಅಳವಡಿಸಿರುವ ಆಲಂಕಾರಿಕ ವಿದ್ಯುತ್ ದೀಪಗಳನ್ನು ಶಾಸಕ ವೇದವ್ಯಾಸ್ ಕಾಮತ್ ಗುರುವಾರ ಉದ್ಘಾಟಿಸಿದರು
ಮಂಗಳೂರಿನ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನದವರೆಗಿನ ರಸ್ತೆಯಲ್ಲಿ ಅಳವಡಿಸಿರುವ ಆಲಂಕಾರಿಕ ವಿದ್ಯುತ್ ದೀಪಗಳನ್ನು ಶಾಸಕ ವೇದವ್ಯಾಸ್ ಕಾಮತ್ ಗುರುವಾರ ಉದ್ಘಾಟಿಸಿದರು   

ಮಂಗಳೂರು: ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನದವರೆಗಿನ ರಸ್ತೆಯಲ್ಲಿ ಅಳವಡಿಸಿರುವ ಆಲಂಕಾರಿಕ ವಿದ್ಯುತ್ ದೀಪಗಳನ್ನು ಶಾಸಕ ವೇದವ್ಯಾಸ್ ಕಾಮತ್ ಗುರುವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ’ನಗರದೆಲ್ಲೆಡೆ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. 24×7 ಕುಡಿಯುವ ನೀರು ಪೂರೈಸುವ ಜಲಸಿರಿ ಯೋಜನೆ, ಮನೆ ಮನೆಗೆ ಗ್ಯಾಸ್ ಸಂಪರ್ಕ ಒದಗಿಸುವ ಯೋಜನೆ, ರಸ್ತೆ, ಚರಂಡಿ ನಿರ್ಮಾಣ, ಕ್ರೀಡಾ ಸಂಕೀರ್ಣ, ಅಂತರರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣ ಯೋಜನೆಗಳು ನಡೆಯುತ್ತಿವೆ. ಮುಂದಿನ ಕೆಲ ವರ್ಷಗಳಲ್ಲಿ ಮಂಗಳೂರು ನಗರವು ಅಭಿವೃದ್ಧಿಶೀಲ ನಗರವಾಗಿ ರೂಪುಗೊಳ್ಳುತ್ತದೆ’ ಎಂದರು.

ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನದ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಸ್ಮಾರ್ಟ್ ರೋಡ್ ಪರಿಕಲ್ಪನೆಯಡಿ ದೇವಸ್ಥಾನದ ಪರಿಸರದ ರಸ್ತೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದರು.

ADVERTISEMENT

ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ನಯನಾ ಕೋಟ್ಯಾನ್, ಕಾರ್ಪೋರೇಟರ್ ಜಯಶ್ರೀ ಕುಡ್ವ, ಸುಧೀರ್ ಶೆಟ್ಟಿ ಕಣ್ಣೂರು, ಲೀಲಾವತಿ ಪ್ರಕಾಶ್, ಸಂಧ್ಯಾ ಮೋಹನ್ ಆಚಾರ್, ಸಂದೀಪ್ ಗರೋಡಿ, ರೇವತಿ ಶ್ಯಾಮ್ ಸುಂದರ್, ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಡೊಂಗರಕೇರಿ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವರದರಾಯ ನಾಗ್ವೇಕರ್, ಗೋಪಿಚಂದ್ ಶೇಟ್, ವಿನಾಯಕ ಶೇಟ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಹೆಗ್ಡೆ, ಶ್ರೀನಿವಾಸ್ ಶೇಟ್, ನಿಲೇಶ್ ಕಾಮತ್, ಕೆನರಾ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಗುರುದತ್ ಕಾಮತ್, ಪ್ರಶಾಂತ್ ಭಟ್, ದಿನೇಶ್ ಭಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.