ಎಐ
ಮಂಗಳೂರು: ಒಂದೇ ಮನೆಯಲ್ಲಿ ವಾಸವಿದ್ದ ಯುವತಿಯರಿಬ್ಬರು ವಾಸವಿದ್ದ ಸಂದರ್ಭದಲ್ಲಿ, ಒಬ್ಬ ಯುವತಿಯ ಖಾಸಗಿ ವಿಡಿಯೊವನ್ನು ಇನ್ನೊಬ್ಬಾಕೆ ಚಿತ್ರೀಕರಿಸಿ, ಸಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಯುವತಿಯೊಬ್ಬಳನ್ನು ಇಲ್ಲಿನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಿರೀಕ್ಷಾ ಬಂಧಿತ ಯುವತಿ.
ಆಸ್ಪತ್ರೆಯೊಂದರಲ್ಲಿ ಶುಶ್ರೂಷಕಿಯಾಗಿರುವ ಆಕೆ ಕಂಕನಾಡಿಯ ಮನೆಯೊಂದರಲ್ಲಿ ಗೆಳತಿ ಜೊತೆ ವಾಸವಿದ್ದಳು. ಈ ವೇಳೆ ಗೆಳತಿಯ ಖಾಸಗಿ ದೃಶ್ಯವನ್ನು ವಿಡಿಯೊ ಮಾಡಿಟ್ಟುಕೊಂಡಿದ್ದಳು. ಆ ವಿಡಿಯೊ ಈಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಈ ಬಗ್ಗೆ ಗೆಳತಿಯು ನಿರೀಕ್ಷಾ ವಿರುದ್ಧ ಕದ್ರಿ ಠಾಣೆಗೆ ದೂರು ನೀಡಿದ್ದಳು. ಆರೋಪಿ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.