ADVERTISEMENT

ಮೋದಿ ಆಗಮನಕ್ಕಾಗಿ ಮಾರ್ಗ ಬದಲಾವಣೆ: ಪ್ರಯಾಣಿಕರ ಪರದಾಟ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 11:29 IST
Last Updated 2 ಸೆಪ್ಟೆಂಬರ್ 2022, 11:29 IST
ಸಮಾವೇಶಕ್ಕೆ ಜನರನ್ನು ಕರೆತರುತ್ತಿರುವ ಬಸ್‌ಗಳು
ಸಮಾವೇಶಕ್ಕೆ ಜನರನ್ನು ಕರೆತರುತ್ತಿರುವ ಬಸ್‌ಗಳು    

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ವಾಹನ ಸಂಚಾರದ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದ್ದು, ವಾಹನ ಸವಾರರು, ಪ್ರಯಾಣಿಕರು ಪರದಾಡುವಂತಾಗಿದೆ.

ಬೈಕಂಪಾಡಿಯಲ್ಲಿ ವಾಹನಗಳಿಗೆ ಪೊಲೀಸರು ತಡೆ ಹಾಕಿರುವುದರಿಂದ ಪೊಲೀಸರು ಮತ್ತು ವಾಹನ ಚಾಲಕರ ನಡುವೆ ಹೆದ್ದಾರಿಯಲ್ಲೇ ಮಾತಿನ ಚಕಮಕಿ ನಡೆಯಿತು. ಇಲ್ಲಿ ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.

ಗೋಲ್ಡ್‌ಫಿಂಚ್ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಲಕ್ಷಾಂತರ ಜನರು ಭಾಗವಹಿಸಿದ್ದಾರೆ. ಸಾರ್ವಜನಿಕರು ಮತ್ತು ಯೋಜನೆಗಳ ಫಲಾನುಭವಿಗಳನ್ನು ಕರೆ ತರಲು 2 ಸಾವಿರಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಹಲವು ಖಾಸಗಿ ಮತ್ತು ಸರ್ಕಾರಿ ಬಸ್‌ಗಳು ಇದಕ್ಕೆ ನಿಯೋಜನೆ ಗೊಂಡಿರುವುದರಿಂದ ನಿತ್ಯ ಸಂಚರಿಸುವ ಪ್ರಯಾಣಿಕರು ಮತ್ತು ತುರ್ತು ಕೆಲಸದ ನಿಮಿತ್ತ ಹೋಗಬೇಕಾದವರು, ಪ್ರಯಾಣಿಕರು ಬಸ್ ಗಾಗಿ ಕಾಯುವ ಪರಿಸ್ಥಿತಿ ಎದುರಾಗಿದೆ.

ADVERTISEMENT

ಕೆಲವರು ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಹೋಗುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.