ADVERTISEMENT

ಕೋವಿಡ್: ನಗರದಲ್ಲಿ ಕಟ್ಟುನಿಟ್ಟಿನ ಕ್ರಮ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 15:28 IST
Last Updated 1 ಆಗಸ್ಟ್ 2021, 15:28 IST

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚುತ್ತಿರುವ ಕಾರಣ ಸಂಭಾವ್ಯ ಮೂರನೇ ಅಲೆಯನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮವಹಿಸಲಾಗುತ್ತಿದೆ.

ಭಾನುವಾರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿ ವಿವಿಧೆಡೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮಾಲ್‍ಗಳು, ಶಾಪಿಂಗ್ ಕಾಂಪ್ಲೆಕ್ಸ್, ಹೋಟೆಲ್, ಸೂಪರ್ ಮಾರ್ಕೆಟ್, ಮಾರುಕಟ್ಟೆ ಇನ್ನಿತರ ಜನನಿಬಿಡ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ, ಮಾಸ್ಕ್ ಧರಿಸದೇ ಇರುವ ಹಾಗೂ ವೈಯಕ್ತಿಕ ಅಂತರ ಕಾಪಾಡಿಕೊಳ್ಳದ ಒಟ್ಟು 25 ಪ್ರಕರಣಗಳನ್ನು ಪತ್ತೆ ಹಚ್ಚಿ, ₹ 12,400 ದಂಡ ವಿಧಿಸಿದರು. ಮುಂದಿನ ದಿನಗಳಲ್ಲೂ ಇದೇ ರೀತಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT