ADVERTISEMENT

ರಾಜ್ಯದ ಭಕ್ತರಿಗೆ ಶಬರಿಮಲೆಯಲ್ಲಿ ಸಹಾಯವಾಣಿ ಕೇಂದ್ರ

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 8:29 IST
Last Updated 16 ಜನವರಿ 2026, 8:29 IST
<div class="paragraphs"><p>ಶಬರಿಮಲೆ ದೇಗುಲ</p></div>

ಶಬರಿಮಲೆ ದೇಗುಲ

   

–ಪಿಟಿಐ ಚಿತ್ರ

ಸುಬ್ರಹ್ಮಣ್ಯ: ಕೇರಳದ ಪ್ರಸಿದ್ಧ ಯಾತ್ರಾ ಕ್ಷೇತ್ರ ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ರಾಜ್ಯದ ಮುಜರಾಯಿ ಇಲಾಖೆ ವತಿಯಿಂದ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು, ಇದರಿಂದ ರಾಜ್ಯದಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ವಿಶೇಷ ಮಾಹಿತಿ ಮತ್ತು ತುರ್ತು ಸಂದರ್ಭದಲ್ಲಿ ಸಹಕಾರ ದೊರಕಲಿದೆ.

ADVERTISEMENT

ಶಬರಿ ಮಲೆಯಲ್ಲಿ ನಡೆಯುವ ಮಂಡಲ ಪೂಜೆ ಮತ್ತು ಮಕರವಿಳಕ್ಕು ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಹೆಚ್ಚಿನ ಭಕ್ತರು ಯಾತ್ರೆ ಕೈಗೊಳ್ಳುವ ಕಾರಣ ಯಾತ್ರಾರ್ಥಿಗಳಿಗೆ ಸೂಕ್ತ ಸಹಕಾರ ಮತ್ತು ಮಾಹಿತಿ ಒದಗಿಸಲು ಸಹಾಯವಾಣಿ ಕೇಂದ್ರವನ್ನು ಆರಂಭಿಸಿದ್ದು, ಜ.19ರ ತನಕ ಸಹಾಯವಾಣಿ ಕೇಂದ್ರವು ಕಾರ್ಯಾಚರಿಸಲಿದೆ.

ಬೆಂಗಳೂರಿನ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಂ.ಮೋಹನ್ ಕುಮಾರ್, ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಚೇರಿ ಅಧೀಕ್ಷಕ ಕೆ.ಎಂ.ಗೋಪಿನಾಥ್ ನಂಬೀಶ, ಕುಕ್ಕೆ ದೇವಳದ ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್ ಅವರನ್ನು ಸಹಾಯವಾಣಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಲು ಮುಜರಾಯಿ ಇಲಾಖೆ ನಿಯೋಜಿಸಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.