ADVERTISEMENT

ಕನ್ನಡ ಸಾಹಿತ್ಯ ಪರಿಷತ್‌: ದಕ್ಷಿಣ ಕನ್ನಡ ಜಿಲ್ಲೆಗೆ ಡಾ. ಎಂ.ಪಿ ಶ್ರೀನಾಥ್‌ ಆಯ್ಕೆ

ದ.ಕ ಜಿಲ್ಲೆಯ 10 ಕಡೆಗಳಲ್ಲಿ ಮತದಾನ ವ್ಯವಸ್ಥೆ: ಶೇ 44.80ರಷ್ಟು ಮತದಾನ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 7:15 IST
Last Updated 22 ನವೆಂಬರ್ 2021, 7:15 IST
ಮಂಗಳೂರಿನ ತಾಲ್ಲೂಕು ಕಚೇರಿಯಲ್ಲಿ ಭಾನುವಾರ ಮತದಾನ ಮಾಡಲು ಸರದಿಯಲ್ಲಿ ನಿಂತಿದ್ದ ಮತದಾರರು.
ಮಂಗಳೂರಿನ ತಾಲ್ಲೂಕು ಕಚೇರಿಯಲ್ಲಿ ಭಾನುವಾರ ಮತದಾನ ಮಾಡಲು ಸರದಿಯಲ್ಲಿ ನಿಂತಿದ್ದ ಮತದಾರರು.   

ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ. ಎಂ.ಪಿ ಶ್ರೀನಾಥ್‌ ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಹಾಗೂ ಕೇಂದ್ರ ಘಟಕದ ಅಧ್ಯಕ್ಷರ ಆಯ್ಕೆಗೆ ಭಾನುವಾರ ಜಿಲ್ಲೆಯಾದ್ಯಂತ ಮತದಾನ ನಡೆದಿತ್ತು. ಸಂಜೆ ಮತಗಳ ಎಣಿಕೆ ಕಾರ್ಯ ಮುಕ್ತಾಯವಾಗಿದೆ.

ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಉಜಿರೆಯ ಎಸ್‌ಡಿಎಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಎಂ.ಪಿ. ಶ್ರೀನಾಥ್ ಮತ್ತು ಮಂಗಳೂರು ವಿಮಾನ ನಿಲ್ದಾಣದ ನಿವೃತ್ತ ನಿರ್ದೇಶಕ ಎಂ.ಆರ್. ವಾಸುದೇವ ಕಣದಲ್ಲಿದ್ದರು. ಸಂಜೆ ಫಲಿತಾಂಶ ಪ್ರಕಟವಾಗಿದ್ದು, ಡಾ.ಎಂ.ಪಿ. ಶ್ರೀನಾಥ್‌ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಮಂಗಳೂರು ತಹಶೀಲ್ದಾರ್‌ ಗುರುಪ್ರಸಾದ್‌ ತಿಳಿಸಿದ್ದಾರೆ.

ADVERTISEMENT

ಜಿಲ್ಲೆಯಲ್ಲಿ ಒಟ್ಟು 10 ಮತದಾನ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, ಒಟ್ಟು 4,538 ಮತದಾರರ ಪೈಕಿ, 2,033 ಜನರ ಮತ ಚಲಾಯಿಸಿದ್ದಾರೆ. ಶೇ 44.80 ರಷ್ಟು ಮತದಾನವಾಗಿದೆ. 1,547 ಪುರುಷ ಹಾಗೂ 486 ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮೂಲ್ಕಿ ತಾಲ್ಲೂಕಿನಲ್ಲಿ ಕನಿಷ್ಠ ಶೇ 30.07 ಹಾಗೂ ಸುಳ್ಯ ತಾಲ್ಲೂಕಿನಲ್ಲಿ ಗರಿಷ್ಠ ಶೇ 62.47 ಮತದಾನ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.