ADVERTISEMENT

₹71 ಲಕ್ಷ ಮೌಲ್ಯದ ಮರಳು ಸ್ವಾಧೀನ

2 ತಿಂಗಳಲ್ಲಿ ₹14 ಲಕ್ಷ ಮೌಲ್ಯದ ಮಾದಕ ದ್ರವ್ಯ ವಶ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 5:41 IST
Last Updated 18 ಆಗಸ್ಟ್ 2020, 5:41 IST

ಮಂಗಳೂರು: ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ₹71 ಲಕ್ಷ ಮೌಲ್ಯದ ಮರಳು ಹಾಗೂ ₹14 ಲಕ್ಷ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಮರಳಿಗೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 13 ಪ್ರಕರಣಗಳ ದಾಖಲಿಸಿಕೊಂಡಿದ್ದು, 10 ಆರೋಪಿಗಳನ್ನು ಬಂಧಿಸಲಾಗಿದೆ. ಮರಳು ಸಾಗಣೆಯ 14 ವಾಹನ, ಒಂದು ಡ್ರೆಜ್ಜಿಂಗ್‌ ಯಂತ್ರ ಸೇರಿದಂತೆ ₹71,28,500 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾದಕ ದ್ರವ್ಯಕ್ಕೆ ಸಂಬಂಧಿಸಿದಂತೆ 6 ಪ್ರಕರಣಗಳಲ್ಲಿ 10 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ₹14.80 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ವಿಕಾಸ್‌ಕುಮಾರ್ ವಿಕಾಸ್‌ ತಿಳಿಸಿದ್ದಾರೆ.

ADVERTISEMENT

ಮಾಹಿತಿ ನೀಡಿ: ಮಾದಕ ವಸ್ತುಗಳ ಮಾರಾಟ ಅಥವಾ ಸಾಗಣೆ, ಅಕ್ರಮ ಮರಳು ದಂಧೆಯ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡುವಂತೆ ವಿಕಾಸ್‌ಕುಮಾರ್‌ ವಿಕಾಸ್‌ ಕೋರಿದ್ದಾರೆ.

ಇಂತಹ ಅಕ್ರಮ ಚಟುವಟಿಕೆಗಳ ಮಾಹಿತಿ ಇದ್ದಲ್ಲಿ ಡಿಸಿಪಿ ಅರುಣಾಂಗ್ಷುಗಿರಿ (ಮೊ.ಸಂ. 9480802304), ಡಿಸಿಪಿ ವಿನಯ್‌ ಗಾಂವಕರ್‌ (ಮೊ.ಸಂ. 9480802305), ಪೊಲೀಸ್ ಕಂಟ್ರೋಲ್‌ ರೂಮ್‌ (ಮೊ.ಸಂ. 9480802321, ದೂ.ಸಂ. 0824–2220800 ಗೆ ಕರೆ ಮಾಡಿ ತಿಳಿಸಬಹುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.