ADVERTISEMENT

ಮರಳು ಗಣಿಗಾರಿಕೆ: ₹9.91 ಲಕ್ಷ ಮೌಲ್ಯದ ಸಾಮಗ್ರಿ ವಶ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 7:08 IST
Last Updated 28 ಆಗಸ್ಟ್ 2020, 7:08 IST

ಮಂಗಳೂರು: ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕಣ್ಣೂರು ಬಡಿಲ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಸ್ಥಳದ ಮೇಲೆ ಸಿಸಿಬಿ ಪೊಲೀಸರು ಗುರುವಾರ ಮುಂಜಾನೆ ದಾಳಿ ನಡೆಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 2 ಟಿಪ್ಪರ್ ಹಾಗೂ ದಾಸ್ತಾನು ಇರಿಸಿದ್ದ 44 ಲೋಡ್ ಮರಳು ಸೇರಿದಂತೆ ₹9.91 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ನೇತ್ರಾವತಿ ನದಿ ತೀರದಲ್ಲಿರುವ ಈ ಎರಡು ಪ್ರದೇಶಗಳಿಂದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಹಿತಿ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ದಾಳಿ ನಡೆಸಿದರು. ಸಿಸಿಬಿ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಆರ್.ನಾಯಕ್, ಉರ್ವ ಇನ್‌ಸ್ಪೆಕ್ಟರ್ ಶರೀಫ್, ದಕ್ಷಿಣ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಗುರುದತ್ ಕಾಮತ್, ಸಿಸಿಬಿ ಸಬ್‌ ಇನ್‌ಸ್ಪೆಕ್ಟರ್‌ ಕಬ್ಬಾಳ್‌ರಾಜ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.