ADVERTISEMENT

ನಟ ನವೀನ್ ಡಿ. ಪಡೀಲ್‌ಗೆ ಚಿತ್ರೀಕರಣ ವೇಳೆ ಬಿದ್ದು ಗಾಯ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 13:47 IST
Last Updated 21 ನವೆಂಬರ್ 2022, 13:47 IST
ನವೀನ್‌ ಡಿ. ಪಡೀಲ್‌
ನವೀನ್‌ ಡಿ. ಪಡೀಲ್‌   

ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಸಿನಿಮಾ ಚಿತ್ರೀಕರಣ ವೇಳೆ ಚಿತ್ರನಟ ನವೀನ್ ಡಿ. ಪಡೀಲ್ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಳು, ಕನ್ನಡ, ಮಲೆಯಾಳ ಭಾಷೆಯಲ್ಲಿ ಬರಲಿರುವ ಸಿನಿಮಾವೊಂದರ ಚಿತ್ರೀಕರಣ ವೇಳೆ ನವೀನ್ ಅವರು ಬಿದ್ದು ತೊಡೆಯ ಮೂಳೆ ಮುರಿತವಾಗಿದೆ.

ನವೀನ್‌ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮೂರು ತಿಂಗಳ ಕಾಲ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.