ADVERTISEMENT

ಸರ್ವೋತ್ತಮ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2022, 16:14 IST
Last Updated 19 ಏಪ್ರಿಲ್ 2022, 16:14 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಆಶ್ರಯದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಅಂಗವಾಗಿ ಒಟ್ಟು 20 ಜನರಿಗೆ 2021 ಹಾಗೂ 2022ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಕೆ. ಕೃಷ್ಣ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.21ರಂದು ಬೆಳಿಗ್ಗೆ 11 ಗಂಟೆಗೆ ಪುರಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಕೊರೊನಾ ಕಾರಣಕ್ಕೆ ಬಾಕಿಯಾಗಿದ್ದ, ಕಳೆದ ವರ್ಷದ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ಈ ವರ್ಷದ ಪ್ರಶಸ್ತಿಗಳನ್ನು ಒಟ್ಟಿಗೆ ಪ್ರದಾನ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದರು.

2019 ಹಾಗೂ 2020ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅಂದಿನ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜಾ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು. ಸಂಘದ ಕಾರ್ಯದರ್ಶಿ ಎಚ್. ಗಣೇಶ್ ರಾವ್, ರಾಜ್ಯ ಪರಿಷತ್ ಸದಸ್ಯೆ ಶೆರ್ಲಿ ಸುಮಾಲಿನಿ, ಖಜಾಂಚಿ ಅಕ್ಷಯ್ ಭಂಡಾರ್ಕರ್, ಹಿರಿಯ ಉಪಾಧ್ಯಕ್ಷ ನವೀನ್ ಕುಮಾರ್ ಎಂ.ಎಸ್. ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.