ADVERTISEMENT

ಸಸಿಹಿತ್ಲು: ನಂದಿನಿ ‘ನದಿ ಉತ್ಸವ’ ಫೆ.3ರಿಂದ

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 6:20 IST
Last Updated 31 ಜನವರಿ 2023, 6:20 IST

ಮಂಗಳೂರು: ವಜ್ರಮಹೋತ್ಸವ ಸಂಭ್ರಮದಲ್ಲಿರುವ ಸಸಿಹಿತ್ಲುವಿನ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆ ವತಿಯಿಂದ ಫೆ.3 ರಿಂದ 5ರವರೆಗೆ ಸಸಿಹಿತ್ಲು ನಂದಿನಿ ನದಿಯಲ್ಲಿ ‘ನದಿ ಉತ್ಸವ’ವನ್ನು ಆಯೋಜಿಸಲಾಗಿದೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವ್ಯಾಯಾಮ ಶಾಲೆಯ ಮಾಜಿ ಅಧ್ಯಕ್ಷ ವಿನೋದ್ ಕುಮಾರ್ ಅವರು, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಕಾರ ನೀಡಿವೆ. ಫೆಬ್ರುವರಿ 3ರಂದು ಸಂಜೆ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಅನಂದ್ ಸಿಂಗ್ ಉತ್ಸವಕ್ಕೆ ಚಾಲನೆ ನೀಡುವರು. ಸಚಿವರಾದ ಸುನಿಲ್ ಕುಮಾರ್, ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸುವರು. ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು ಎಂದರು.

ನದಿ ಉತ್ಸವದ ಅಂಗವಾಗಿ ಬೋಟ್‌ರೇಸ್, ಈಜು, ಸ್ಟ್ಯಾಂಡ್ ಅಪ್ ಪೆಡಲ್, ಜನಪದ ನೃತ್ಯ ಸ್ಪರ್ಧೆ , ಆಹಾರ ಮೇಳ ಆಯೋಜಿಸಲಾಗಿದೆ. ಫೆ.4ರಂದು ಬೆಳಿಗ್ಗೆ 6 ಗಂಟೆಗೆ ಓಟದ ಸ್ಪರ್ಧೆಗೆ ಚಾಲನೆ, ಸಂಜೆ 3.30ಕ್ಕೆ ನದಿ ಸ್ಪರ್ಧೆಗೆ ಚಾಲನೆ ದೊರೆಯಲಿದೆ ಎಂದರು.

ADVERTISEMENT

ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ನಿತಿನ್ ಸುವರ್ಣ, ಪದಾಧಿಕಾರಿಗಳಾದ ರಿತೇಶ್ ಸಾಲ್ಯಾನ್, ಲಲಿತ್ ಶ್ರೀಯಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.