ಮಂಗಳೂರು: ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ನಿಷೇಧ ಸ್ಯಾಟಲೈಟ್ ಫೋನ್ ಕರೆ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ವಿಭಾಗ ಹಾಗೂ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಗುರುವಾರ ಶಂಕಿತ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸದ್ದಾಗಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ರವಾನೆಯಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರಿಂದ ಮಾಹಿತಿ ಕಲೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಓದಿ:ರಾಜ್ಯದ ದಟ್ಟಾರಣ್ಯದಲ್ಲಿ ತುರಾಯಾ ಸ್ಯಾಟಲೈಟ್ ಫೋನ್ ಬಳಕೆ: ಗುಪ್ತಚರ ಮಾಹಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.