ಉಳ್ಳಾಲ: ಸೌದಿ ಅರೇಬಿಯಾದಲ್ಲಿ ಬಸ್‌ಗಳ ನಡುವೆ ನಡೆದ ಅಪಘಾತದಲ್ಲಿ ಉಳ್ಳಾಲದ ಯುವಕ ಭಾನುವಾರ ಮೃತಪಟ್ಟಿದ್ದಾರೆ.
ಉಳ್ಳಾಲ ಮಿಲ್ಲತ್ ನಗರದ ಮೊಹಮ್ಮದ್ ಅವರ ಪುತ್ರ ಅಬ್ದುಲ್ ರಾಝಿಕ್ (27) ಮೃತ ಯುವಕ. ಸೌದಿ ಅರೇಬಿಯಾದಲ್ಲಿದ್ದ ರಾಝಿಕ್ ರಾತ್ರಿ ಪಾಳಿಯ ಕೆಲಸಕ್ಕೆ ತೆರಳುತ್ತಿದ್ದರು. ಅವರು ಪ್ರಯಾಣಿಸುತ್ತಿದ್ದ ಬಸ್‌ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೊಹಮ್ಮದ್ ಅವರ ಕೊನೆಯ ಪುತ್ರನಾಗಿರುವ ರಾಝಿಕ್ ಸಿವಿಲ್ ಎಂಜಿನಿಯರಿಂಗ್ ಕೋರ್ಸ್ ಮುಗಿಸಿ ವಿದೇಶಕ್ಕೆ ತೆರಳಿದ್ದರು. ಜುಬೈಲ್ನ ಪಾಲಿಟೆಕ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಒಂದು ತಿಂಗಳ ರಜೆಯಲ್ಲಿ ಜುಲೈ 11ರಂದು ಊರಿಗೆ ಬಂದಿದ್ದ ಅವರು ಆಗಸ್ಟ್ 15ರಂದು ಸೌದಿ ಅರೇಬಿಯಾಕ್ಕೆ ತೆರಳಿದ್ದರು.
ರಾಝಿಕ್ ಅವರಿಗೆ ತಂದೆ ತಾಯಿ, ಮೂವರು ಸಹೋದರಿಯರು, ಒಬ್ಬ ಸಹೋದರ ಇದ್ದಾರೆ. ಅವರ ಸಹೋದರ ಹಾಗೂ ಸಹೋದರಿ ಅನಾರೋಗ್ಯದಿಂದ ಈ ಹಿಂದೆಯೇ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.