ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್‌ನ ಸ್ವ ಸಹಾಯ ಗುಂಪುಗಳ ರಜತ ಸಂಭ್ರಮವನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.
ಮಂಗಳೂರು: ‘ನವೋದಯ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್‌ಸಿಡಿಸಿಸಿ) ಬ್ಯಾಂಕ್ ವತಿಯಿಂದ ಹಣ ಸಂಗ್ರಹಿಸಿ ಸೈನಿಕ ಕಲ್ಯಾಣ ನಿಧಿಗೆ ₹3 ಕೋಟಿ ನೆರವು ನೀಡಲಾಗುವುದು’ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಶನಿವಾರ ತಿಳಿಸಿದರು.
ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್‌ನ ನವೋದಯ ಸ್ವ ಸಹಾಯ ಗುಂಪುಗಳ ರಜತ ಸಂಭ್ರಮದ ನಿಮಿತ್ತ ನಡೆದ ಸಮಾವೇಶದಲ್ಲಿ, ಟ್ರಸ್ಟ್‌ನ ಸಂಸ್ಥಾಪಕರೂ ಆದ ಅವರು ಈ ಮಾಹಿತಿ ನೀಡಿದರು.
‘ದೇಶದ ಗಡಿಯಲ್ಲಿ ನಮ್ಮ ರಕ್ಷಣೆಗಾಗಿ ಹೋರಾಡುತ್ತಿರುವ ಸೈನಿಕರಿಗೆ ನೆರವಾಗುವುದು ನಮ್ಮ ಕರ್ತವ್ಯ’ ಎಂದೂ ಹೇಳಿದರು.
ರಾಜ್ಯಪಾಲ ಥಾವರಚಂದ್ ಗೆಹಲೋತ್ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮಾವೇಶ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ‘ಸಂತೃಪ್ತಿ’ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.