ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಶನಿವಾರ ಭೇಟಿನೀಡಿದ ನಬಾರ್ಡ್ ಸಿಜಿಎಂ ಸುರೇಂದ್ರ ಬಾಬು ಅವರನ್ನು ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಸನ್ಮಾನಿಸಿದರು.
ಮಂಗಳೂರು: ‘ಕೋರ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕ್‌ನಂತಹ ವ್ಯವಸ್ಥೆಯನ್ನು ಅಳವಡಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್, ದೇಶದ ಇತರ ಸಹಕಾರಿ ಬ್ಯಾಂಕ್‌ಗಳಿಗೆ ಮಾದರಿಯಾಗಿದೆ’ ಎಂದು ನಬಾರ್ಡ್ ಸಿಜಿಎಂ ಸುರೇಂದ್ರ ಬಾಬು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಶನಿವಾರ ಭೇಟಿ ನೀಡಿದ ಅವರು, ಬ್ಯಾಂಕಿನ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು. ‘ಎಸ್‌ಸಿಡಿಸಿಸಿ ದೇಶದ ಡಿಸಿಸಿ ಬ್ಯಾಂಕ್‌ಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಗ್ರಮಾನ್ಯ ಬ್ಯಾಂಕ್. ಸಂಪೂರ್ಣ ಗಣಕೀಕೃತವಾಗಿರುವ 113 ಶಾಖೆಗಳ ಮೂಲಕ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್, ಕೃಷಿ ಸಾಲ ವಿತರಣೆ ಹಾಗೂ ಮರುಪಾವತಿಯಲ್ಲಿ ಮಾತ್ರವಲ್ಲ ನಬಾರ್ಡ್ ಯೋಜನೆಗಳ ಅನುಷ್ಠಾನದಲ್ಲೂ ಮುಂಚೂಣಿಯಲ್ಲಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರು ಸುರೇಂದ್ರ ಬಾಬು ಅವರನ್ನು ಸ್ವಾಗತಿಸಿ, ಬ್ಯಾಂಕ್ ಪ್ರಗತಿಯ ಪರಿಚಯ ಮಾಡಿಕೊಟ್ಟರು. ಬ್ಯಾಂಕಿಗೆ ಮೊದಲ ಬಾರಿ ಭೇಟಿನೀಡಿದ ಸುರೇಂದ್ರ ಬಾಬು ಅವರನ್ನು ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.
ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಬಾರ್ಡ್ ಡಿಡಿಎಂ ಸಂಗೀತಾ ಕರ್ತ, ಸಹಕಾರ ಸಂಘಗಳ ಉಪ ನಿಬಂಧಕ ಎಚ್.ಎನ್.ರಮೇಶ್, ನಿರ್ದೇಶಕರುಗಳಾದ ಎಂ. ವಾದಿರಾಜ ಶೆಟ್ಟಿ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಉಪಸ್ಥಿತರಿದ್ದವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.