ADVERTISEMENT

ನೇಕಾರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 15:33 IST
Last Updated 3 ಡಿಸೆಂಬರ್ 2022, 15:33 IST

ಮಂಗಳೂರು: ಪಿಯುಸಿ, ಐಟಿಐ, ಡಿಪ್ಲೊಮಾ, ಸ್ನಾತಕ ಪದವಿ, ಎಲ್‍ಎಲ್‍ಬಿ, ಬಿ.ಫಾರ್ಮಾ, ನರ್ಸಿಂಗ್ ಮೊದಲಾದ ಅರೆವೈದ್ಯಕೀಯ ಕೋರ್ಸ್‌, ಹಾಗೂ ಸ್ನಾತಕೋತ್ತರ ಕೋರ್ಸ್‍ಗಳನ್ನು ಅಧ್ಯಯನ ಮಾಡುತ್ತಿರುವ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕೈಮಗ್ಗ ಗಣತಿ, ನೇಕಾರ್ ಸಮ್ಮಾನ್ ಯೋಜನೆ ಹಾಗೂ ಮಗ್ಗ ಪೂರ್ವ ಚಟುವಟಿಕೆಗಳ ಸಮೀಕ್ಷೆಯಲ್ಲಿ ಗುರುತಿಸಿರುವ ನೇಕಾರರ ಮಾಹಿತಿಯನ್ವಯ ಅವರ ಮಕ್ಕಳು ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಪಡೆಯುತ್ತಾರೆ.
ಅರ್ಹ ನೇಕಾರರು ತಮ್ಮ ಮಕ್ಕಳ ಹೆಸರನ್ನು ನೋಂದಾಯಿಸಲು ಆನ್‍ಲೈನ್ ಮೂಲಕ ಸೇವಾಸಿಂಧು ತಂತ್ರಾಂಶದಲ್ಲಿ ಹಾಗೂ ಕರ್ನಾಟಕ ಒನ್ ಮತ್ತು ಗ್ರಾಮ್ ಒನ್ ಕೇಂದ್ರಗಳ‌ಲ್ಲಿ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದು.

ನಂತರ ವಿದ್ಯಾರ್ಥಿವೇತನಕ್ಕೆ ನೇಕಾರರ ಮಕ್ಕಳು ರಾಜ್ಯ ವಿದ್ಯಾರ್ಥಿವೇತನ ಎಸ್‍ಎಸ್‍ಪಿ ತತ್ರಾಂಶದಲ್ಲಿ ಆನ್‍ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಡಿ.10ರೊಳಗೆ ನೋಂದಾಯಿಸಿಕೊಳ್ಳಬೇಕು. ಸೇವಾಸಿಂಧು ಮತ್ತು ಎಸ್‍ಎಸ್‍ಪಿ ಪೋರ್ಟಲ್‍ನ ಮಾಹಿತಿ ಹೊಂದಾಣಿಕೆಯಾದ ಬಳಿಕ ವಿದ್ಯಾರ್ಥಿಗಳ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ವಿದ್ಯಾರ್ಥಿವೇತನ ಪಾವತಿಸಲಾಗುವುದು. ಮಾಹಿತಿಗೆ ಉಡುಪಿ ಅಥವಾ ಮಂಗಳೂರಿನ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಸಂಪರ್ಕ: 0824–2225056 ಅಥವಾ http://www.karnatakadht.org ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.