ADVERTISEMENT

ಸ್ಕೂಟರ್ ಗಳ ಢಿಕ್ಕಿ: ಸಹಸವಾರ ಸಾವು

​ಪ್ರಜಾವಾಣಿ ವಾರ್ತೆ
Published 17 ಮೇ 2024, 5:01 IST
Last Updated 17 ಮೇ 2024, 5:01 IST

ಉಳ್ಳಾಲ: ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರಿಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿಯನ್ನು ಅಡ್ಡ ಹಾಯುತ್ತಿದ್ದ ಮತ್ತೊಂದು ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸಹ ಸವಾರರೊಬ್ಬರು ಗುರುವಾರ ಮೃತಪಟ್ಟರು. 

ಉಳ್ಳಾಲ ಕೋಟೆಪುರ, ಕೋಡಿ ನಿವಾಸಿ ಅಹಮ್ಮದ್ ನಿಷಾದ್ (22) ಮೃತ ಯುವಕ. ನಿಷಾದ್ ಮುಂಜಾನೆ ವೇಳೆ ಸಯ್ಯದ್ ಹಫೀಜ್ ಅವರೊಂದಿಗೆ ಸ್ಕೂಟರ್‌ನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿತ್ತು.  ಢಿಕ್ಕಿಯ ರಭಸಕ್ಕೆ ಎರಡೂ ಸ್ಕೂಟರ್‌ಗಳ ಸವಾರರು ರಸ್ತೆಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡ ನಿಷಾದ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸ್ಕೂಟರ್ ಸವಾರರಾದ ಸವಾರ ಹಫೀಜ್‌, ಕುತ್ತಾರು ಪದವು ನಿವಾಸಿ ಅಬ್ಬೂಬಕ್ಕರ್ ಸಿದ್ದೀಕ್ ಅವರೂ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.