ADVERTISEMENT

ಸಜಿಪಮುನ್ನೂರು | ಲಾರಿ ಡಿಕ್ಕಿ: ಸ್ಕೂಟರ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 13:53 IST
Last Updated 8 ಜೂನ್ 2024, 13:53 IST
ರಾಮ ನಾಯ್ಕ್
ರಾಮ ನಾಯ್ಕ್   

ಬಂಟ್ವಾಳ: ಇಲ್ಲಿನ ಸಜಿಪಮುನ್ನೂರು ಗ್ರಾಮದ ಕಂದೂ ಎಂಬಲ್ಲಿ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.

ಇಲ್ಲಿನ ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ, ಬಂಟ್ವಾಳ ಬೈಪಾಸ್ ಪೆಟ್ರೋಲ್ ಪಂಪ್ ಮ್ಯಾನೇಜರ್ ರಾಮ ನಾಯ್ಕ್ (47) ಮೃತಪಟ್ಟವರು. ಅವರಿ ಸ್ಕೂಟರ್‌ನಲ್ಲಿ ಮುಡಿಪುವಿಗೆ ಹೋಗಿ ಬಿ.ಸಿ.ರೋಡಿಗೆ ಬರುವಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿಯಾಗಿದ್ದು, ಮೃತಪಟ್ಟಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT