ADVERTISEMENT

ಉಜಿರೆ: ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’ ಕಾರ್ಯಕ್ರಮ ಜನವರಿ 31 ರಂದು

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 13:29 IST
Last Updated 29 ಜನವರಿ 2026, 13:29 IST
   

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಮಾರಂಭದ ಉದ್ಘಾಟನೆ ಹಾಗೂ ಅಭಿನಂದನಾ ಗ್ರಂಥದ ಬಿಡುಗಡೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಎಸ್. ನೆರವೇರಿಸಲಿದ್ದಾರೆ. ಸಾಕ್ಷ್ಯ ಚಿತ್ರದ ಬಿಡುಗಡೆಯನ್ನು ಬೆಂಗಳೂರಿನ ಕ್ಷೇಮವನ‌ದ ಕಾರ್ಯನಿರ್ವಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಮಾಡುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ .ಪಿ ವಹಿಸಲಿದ್ದಾರೆ. ಸಮಾರಂಭದಲ್ಲಿ ಉಜಿರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಉಪಸ್ಥಿತರಿರುವರು.

ADVERTISEMENT

ಈ ಕಾರ್ಯಕ್ರಮವು ಜನವರಿ 31, ಶನಿವಾರ ಬೆಳಿಗ್ಗೆ 10 ಗಂಟೆಗೆ, ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.